ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಈ ಬಗ್ಗೆ ಮಾತನಾಡಿರುವ ಅವರು, ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಹೇಳಿದರು.
ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಈ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಹೇಳಿದರು.





