ಬೆಂಗಳೂರು : ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕಾಗುತ್ತಿರುವ ನಷ್ಟದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಚಾರಾಂದೋಲನ ನಡೆಸುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಕನ್ನಡದ ನೆಲ, ಜಲ, ಭಾಷೆಗೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಅಭಿಯಾನಕ್ಕೆ ಸುದ್ದಿ ಮಾಧ್ಯಮ, ವೃತ್ತ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಲಾಗಿದೆ.
ಸಾಮಾಜಿಕ ಜಾಲತಾಣ ಅಭಿಯಾನದ ಮುಂದಿನ ಭಾಗವಾಗಿ ಇಂದು ಅಂತರ್ ರಾಜ್ಯ ನೀರು ಹಂಚಿಕೆಗೆ ಸಂಬಂಸಿದ ಕುಡಿಯುವ ನೀರು, ಕೃಷಿ ಮತ್ತು ವಿದ್ಯುತ್ ಉತ್ಪಾದನೆಯ ಉದ್ದೇಶದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ, ಅನುದಾನ ಮತ್ತು ಪ್ರಾಶಸ್ತ್ಯ ನೀಡದೆ, ಬರದ ನಡುವೆ ಕನ್ನಡಿಗರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿರುವ ಬಗ್ಗೆ ಧ್ವನಿಯೆತ್ತಲಾಗುವುದು ಎಂದು ತಿಳಿಸಲಾಗಿದೆ.
ಕಾವೇರಿ ನೀರು ಹಂಚಿಕೆಯಲ್ಲಿ ಉಂಟಾಗಿರುವ ಸಮಸ್ಯೆಯ ಬಗ್ಗೆ ಪ್ರಧಾನಿ ಮೋದಿ ಅವರ ಮೌನ, ಮೇಕೆದಾಟು ಯೋಜನೆಗೆ ಸಿಗದ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಘೋಷಿಸಲಾದ ಅನುದಾನ ಬಜೆಟ್ ಪುಸ್ತಕಕ್ಕಷ್ಟೇ ಸೀಮಿತವಾಗಿರುವುದು ಹೀಗೆ ಕೇಂದ್ರದ ಅಸಹಕಾರದಿಂದಾಗಿ ಕರುನಾಡು ಬಡವಾಗುತ್ತಿರುವ ಬಗ್ಗೆ ನ್ಯಾಯಕ್ಕಾಗಿ ಆಗ್ರಹಿಸಲಾಗುವುದು. ಜನರ ಪರವಾದ ಈ ಕೂಗಿಗೆ ತಮ್ಮೆಲ್ಲರ ಬೆಂಬಲವಿರಲಿ ಎಂದು ಮನವಿ ಮಾಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…