Mysore
21
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ ಪ್ರಕರಣ: ಆರೋಪಿ ವಿರುದ್ಧ ಕ್ರಮಕ್ಕೆ ಸೂಚನೆ ಎಂದ ಸಚಿವ ಪರಮೇಶ್ವರ್‌

There is no financial shortage in the government Minister G Parameshwara

ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ಧ ಲವ್‌ ಜಿಹಾದ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಪರಮೇಶ್ವರ್‌ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್‌ ಟ್ರೈನರ್‌ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇನ್ನು ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೇಸ್‌ಗಳಲ್ಲಿ ಕಠಿಣ ಕ್ರಮ ಇರುತ್ತದೆ ಎಂದರು.

Tags:
error: Content is protected !!