Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಲವ್‌ ಸೆಕ್ಸ್‌ ದೋಖಾ ಪ್ರಕರಣ: ಬಿಜೆಪಿ ಮುಖಂಡನ ಪುತ್ರ ಅರೆಸ್ಟ್‌

Love Sex Dhokha Case BJP Leaders Son Arrested

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಲವ್‌ ಸೆಕ್ಸ್‌ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಕೃಷ್ಣ ಜೆ ರಾವ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಿಜೆಪಿ ಮುಖಂಡನ ಪುತ್ರನಾಗಿರುವ ಕೃಷ್ಣ ಜೆ ರಾವ್‌ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಪದೇ ಪದೇ ಅತ್ಯಾಚಾರವೆಸಗಿದ್ದ. ಯುವತಿ ಗರ್ಭಿಣಿಯಾಗುತ್ತಿದ್ದಂತೆ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದ. ನೊಂದ ಸಂತ್ರಸ್ತೆ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಕೆಲ ದಿನಗಳ ಹಿಂದಷ್ಟೇ ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ್ದಳು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ ರಾವ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.

ಇದೀಗ ಕೃಷ್ಣ ಜೆ ರಾವ್‌ನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಯುವತಿಯನ್ನು ಪ್ರೀತಿಸಿ, ಕೈಕೊಟ್ಟ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದೀಗ ಆರೋಪಿಯ ಬಂಧನವಾಗಿದೆ.

Tags:
error: Content is protected !!