Love Sex Dhokha Case BJP Leaders Son Arrested
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಲವ್ ಸೆಕ್ಸ್ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷ್ಣ ಜೆ ರಾವ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಿಜೆಪಿ ಮುಖಂಡನ ಪುತ್ರನಾಗಿರುವ ಕೃಷ್ಣ ಜೆ ರಾವ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಪದೇ ಪದೇ ಅತ್ಯಾಚಾರವೆಸಗಿದ್ದ. ಯುವತಿ ಗರ್ಭಿಣಿಯಾಗುತ್ತಿದ್ದಂತೆ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದ. ನೊಂದ ಸಂತ್ರಸ್ತೆ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಕೆಲ ದಿನಗಳ ಹಿಂದಷ್ಟೇ ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ್ದಳು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ ರಾವ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.
ಇದೀಗ ಕೃಷ್ಣ ಜೆ ರಾವ್‌ನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಯುವತಿಯನ್ನು ಪ್ರೀತಿಸಿ, ಕೈಕೊಟ್ಟ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದೀಗ ಆರೋಪಿಯ ಬಂಧನವಾಗಿದೆ.
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…