Mysore
30
scattered clouds

Social Media

ಶನಿವಾರ, 26 ಏಪ್ರಿಲ 2025
Light
Dark

ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಬಗ್ಗೆ ವಿಜಯಪುರದಲ್ಲಿಂದು ಮಾತನಾಡಿದ ಅವರು, ಜಾತಿಗಣತಿ ಅಧ್ಯಯನ ಮಾಡಲು ಇಂದು ವರದಿ ಪ್ರತಿ ಬಂದಿದೆ. ನಾನು ಇದುವರೆಗೂ ಅದನ್ನು ಅಧ್ಯಯನ ಮಾಡಿಲ್ಲ. ಅದನ್ನು ತೆಗೆದುಕೊಂಡು ನೋಡುತ್ತೇನೆ ಎಂದರು.

ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಿದೆ. ಇದನ್ನು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಲಿಂಗಾಯತ ಸಮಾಜದವರು ಮೀಸಲಾತಿಗಾಗಿ ದಾಖಲಾತಿಗಳಲ್ಲಿ ಬೇರೆ ನಮೂದಿಸಿದ್ದಾರೆ. ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು.

Tags: