ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿಂದು ಮಾತನಾಡಿದ ಅವರು, ಜಾತಿಗಣತಿ ಅಧ್ಯಯನ ಮಾಡಲು ಇಂದು ವರದಿ ಪ್ರತಿ ಬಂದಿದೆ. ನಾನು ಇದುವರೆಗೂ ಅದನ್ನು ಅಧ್ಯಯನ ಮಾಡಿಲ್ಲ. ಅದನ್ನು ತೆಗೆದುಕೊಂಡು ನೋಡುತ್ತೇನೆ ಎಂದರು.
ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಿದೆ. ಇದನ್ನು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಲಿಂಗಾಯತ ಸಮಾಜದವರು ಮೀಸಲಾತಿಗಾಗಿ ದಾಖಲಾತಿಗಳಲ್ಲಿ ಬೇರೆ ನಮೂದಿಸಿದ್ದಾರೆ. ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…