ರಾಜ್ಯ

ರಾಜ್ಯದಲ್ಲಿ ಕಡಿಮೆ ಸ್ಥಾನ, ಹಗರಣದ ಆರೋಪ: ಸಚಿವರಿಗೆ ರಾಹುಲ್‌ ಗಾಂಧಿ ಎಚ್ಚರಿಕೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಿರೀಕ್ಷೆಯಂತೆ ಲಭಿಸದ ಫಲಿತಾಂಶ, ರಾಜ್ಯದಲ್ಲಿ ಕಡಿಮೆ ಸ್ಥಾನ, ಪರಿಶಿಷ್ಟ ನಿಗಮದ ಹಗರಣ ಆರೋಪ ಹಿನ್ನೆಲೆ ಸಚಿವರ ಜೊತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ ಉಸ್ತುವಾರಿ ಹೊತ್ತ ಸಚಿವರು ಕ್ಷೇತ್ರದಲ್ಲಿ ಕಡಿಮೆ ಮತಗಳಿಸಿ ಸೋತಿದಕ್ಕೆ ರಾಹುಲ್‌ ಗಾಂಧಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೀವು ಹೇಳಿದವರಿಗೆ ಟಿಕೆಟ್‌ ನೀಡಿದ್ದೇವೆ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಿಮ್ಮ ಮೇಲಿತ್ತು. ಆದರೆ ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ಕೊಟ್ಟ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸುವಲ್ಲಿ ವಿಫಲರಾದವರ ಮೇಲೆ ಯಾವ ಕ್ರಮ ಕೈಗೊಳ್ಳಬೇಕು. ಮುಂದೆ ಹೀಗಾಗದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ರಾಹುಲ್‌ ಗಾಂಧಿ ಅವರು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವರು ಸರ್ಕಾರಕ್ಕೆ ಧಕ್ಕೆ ಅಥವಾ ಮುಜುಗರ ಬರುವಂತ ಕೆಲಸ ಮಾಡಬಾರದು. ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದು ಇಕ್ಕಟ್ಟಿಗೆ ಸಿಲುಕಿಸಬಾರದು. ಜೊತೆಗೆ ವಿರೋಧ ಪಕ್ಷಗಳ ವಾಗ್ದಾಳಿಗೆ ಸಿಲುಕದಂತೆ ಕೆಲಸ ಮಾಡಿ ಎಂದು ಎಲ್ಲಾ ಸಚಿವರಿಗೆ ಅವರು ಸೂಚಿಸಿದ್ದಾರೆ.

 

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

53 seconds ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

53 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

5 hours ago