ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ, ಒಳನಾಡು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದ್ದು, ಇಂದು ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಮಂಡ್ಯ, ಶಿವಮೊಗ್ಗ, ಮೈಸೂರು, ಕೋಲಾರ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗಲಿದ್ದು, ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.





