ರಾಜ್ಯ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ, ಒಳನಾಡು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದ್ದು, ಇಂದು ಹಾಗೂ ನಾಳೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಮಂಡ್ಯ, ಶಿವಮೊಗ್ಗ, ಮೈಸೂರು, ಕೋಲಾರ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗಲಿದ್ದು, ಎರಡು ದಿನ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

44 mins ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

1 hour ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

1 hour ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

2 hours ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

5 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

5 hours ago