ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನು ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಧಾರಾಕಾರ ಮಳೆ
ಅಕ್ಟೋಬರ್.27ರಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಳೆ ಹಾಗೂ ನಾಡಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನು ನವೆಂಬರ್.2ರವರೆಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಜಿಕ ವಿಪತ್ತು ನಿರ್ವಹಣಾ ಕೇಂದ್ರ ಎಕ್ಸ್ ಸಂದೇಶದಲ್ಲಿ ಮಾಹಿತಿ ನೀಡಿದೆ.





