Mysore
21
clear sky

Social Media

ಸೋಮವಾರ, 09 ಮಾರ್ಚ್ 2026
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಧಾರಾಕಾರ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಬೆಳಕಿನ ಹಬ್ಬ ದೀಪಾವಳಿ ದಿನದಂದೇ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಬ್ಬದ ಕಳೆಯನ್ನೇ ಕಸಿದುಕೊಂಡಿದೆ.

ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆಯೂ ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಉಡುಪಿ, ಉತ್ತರ ಕನ್ನಡದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Tags:
error: Content is protected !!