ಬೆಂಗಳೂರು: ಬಂಗಾಳಕೊಲ್ಲಿ ವಾಯುವ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ಆಗಸ್ಟ್.17ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಂಗಳೂರಿನಲ್ಲೂ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ಇನ್ನು ಇಂದು ಕೂಡ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಸರಗೂರು ತಾಲ್ಲೂಕಿನಲ್ಲಿ ಮಧ್ಯಾಹ್ನದ ವೇಳೆಗೆ ಭಾರೀ ಮಳೆಯಾಗಿದೆ. ಮಳೆ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





