ರಾಜ್ಯ

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ ಅನಿಲ ಸಿಲಿಂಡರ್‌ಗಳು ಸಿಗದೆ ಹೋಟೆಲ್‌ ಮುಚ್ಚುವ ಮಟ್ಟ ತಲುಪಿವೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ದನಿ ಎತ್ತುತ್ತಾರೆ. ಇದರ ಬಗ್ಗೆಯೂ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಕೇಳಿದಾಗ, ‘ಚರ್ಚೆ ನಡೆಸಲು ಕೇಂದ್ರ ಸರ್ಕಾರಕ್ಕೆ ಏಕೆ ಭಯ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ. ಸಂಸತ್ ಅಧಿವೇಶನದಲ್ಲಿ ಈ ವಿಚಾರವನ್ನ ಕೇಂದ್ರ ಸರ್ಕಾರ ಚರ್ಚೆ ಮಾಡಬೇಕು. ಈ ವಿಚಾರ ಚರ್ಚೆ ನಡೆಸಲು ಇವತ್ತಿನ ತನಕ ಅವಕಾಶ ನೀಡುತ್ತಿಲ್ಲ. ಆದ ಕಾರಣಕ್ಕೆ ಇಂಡಿಯಾ ಒಕ್ಕೂಟದ ಪ್ರತಿನಿಧಿಗಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

ಹೋಟೆಲ್ ಹಾಗೂ ಇತರೇ ಉದ್ದಿಮೆಗಳು ಇದರಿಂದ ತೊಂದರೆಗೆ ಒಳಗಾಗಿವೆ. ಇದರ ಬಗ್ಗೆ ನಾವು ದನಿ ಎತ್ತಬೇಕಿರುವುದು ನಮ್ಮ ಕರ್ತವ್ಯ. ಕೋಟ್ಯಂತರ ಮಹಿಳೆಯರ ಮೇಲೆ ಇದು ಪರಿಣಾಮ ಬೀರಿದೆ. ಯುದ್ದದ ಪರಿಣಾಮವಾಗಿ ಸೌದಿ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಭಾರತೀಯ ಉದ್ಯಮಿಗಳು, ಕೆಲಸಗಾರರ ಮೇಲೆ ಪರಿಣಾಮ ಬೀರಿದೆ ಎಂದರು.

ದೇವೇಗೌಡರ ಮನಸ್ಸು ನೋಯಿಸಲು ಇಷ್ಟಪಡುವುದಿಲ್ಲ
ದೇವೇಗೌಡರು ಮೇಕೆದಾಟು, ಎತ್ತಿನಹೊಳೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಮಾತನಾಡುವಂತೆ ಹೇಳಲಿ. ಈ ವಯಸ್ಸಿನಲ್ಲಿ ಅವರ ಮೇಲೆ ವಾಗ್ದಾಳಿ ಮಾಡುವುದು ಸರಿಯಲ್ಲ. ನನಗೆ ಇಷ್ಟವೂ ಇಲ್ಲ. ಈ ವಯಸ್ಸಿನಲ್ಲಿ ಮನಸ್ಸು ನೋಯಿಸುವುದು ಬೇಡ ಎಂದುಕೊಂಡಿರುವೆ. ಅವರೇ ಇವುಗಳಿಗೆ ಪರಿಹಾರ ಸೂಚಿಸಲಿ. ಅದೇ ರೀತಿ ಅವರ ಪಕ್ಷದ ಸದಸ್ಯರುಗಳಿಗೆ ವಿಧಾನಸಭೆಯಲ್ಲಿ ಮಾತನಾಡಲು ಹೇಳಲಿ. ಆಗ ನಾನು ನಮ್ಮ ಕಾಲದಲ್ಲಿ ಏನೇನು ಆಗಿದೆ ಎಂದು ಹೇಳುತ್ತೇನೆ ಎಂದರು.

ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿರುವ ಬಗ್ಗೆ ಕೇಳಿದಾಗ, ‘ಶಾಸಕರಿಗೆ ಹಾಗೂ ಬೆಂಗಳೂರಿನಲ್ಲಿರುವ ಎಐಸಿಸಿ ಕಾರ್ಯದರ್ಶಿಗಳಿಗೆ, ಸಂಸದರಿಗೆ ಔತಣಕೂಟ ಏರ್ಪಡಿಸಲಾಗಿದೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡ ದಿನದಿಂದ ಇಲ್ಲಿಯವರೆಗಿನ ಪ್ರಯಾಣವನ್ನ ಪ್ರತ್ಯೇಕ ಮಾಧ್ಯಮಗೋಷ್ಟಿ ನಡೆಸಿ ವಿವರಿಸುತ್ತೇನೆ ಎಂದು ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

4 mins ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

2 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

2 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

3 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

3 hours ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

3 hours ago