Mysore
24
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ನಡೆಸುತ್ತಿದ್ದು, ಇರಾನ್‌ ದೇಶ ತತ್ತರಿಸಿ ಹೋಗಿದೆ. ಈ ನಡುವೆಯೇ ಭಾರತಕ್ಕೆ ಗ್ಯಾಸ್‌ ಸಿಲಿಂಡರ್‌ ಅಭಾವ ಎದ್ದು ಕಾಣುತ್ತಿದೆ.

ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸುತ್ತಿವೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ಎಲ್ಲಾ ಕಡೆಗಳಲ್ಲಿ ಸಮಸ್ಯೆ ಇದೆ. ಕತಾರ್‌ ಅರೇಬಿಯಾದಿಂದ ಗ್ಯಾಸ್‌ ಸಿಲಿಂಡರ್‌ ಬರುತ್ತದೆ. ಪೆಟ್ರೋಲ್‌ ಬೇರೆ ದೇಶಗಳಿಂದ ಬರಲಿದೆ. ಎಲ್‌ಪಿಜಿ ತರಲು ನಾಲ್ಕೈದು ದೇಶಗಳ ಜೊತೆ ಮಾತುಕತೆ ನಡೆದಿದೆ. ಇನ್ನು ನಾಲ್ಕೈದು ದಿನಗಳ ನಂತರ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಾಗಲಿದೆ ಎಂದು ಹೇಳಿದರು.

 

Tags:
error: Content is protected !!