ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ನಡೆಸುತ್ತಿದ್ದು, ಇರಾನ್ ದೇಶ ತತ್ತರಿಸಿ ಹೋಗಿದೆ. ಈ ನಡುವೆಯೇ ಭಾರತಕ್ಕೆ ಗ್ಯಾಸ್ ಸಿಲಿಂಡರ್ ಅಭಾವ ಎದ್ದು ಕಾಣುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸುತ್ತಿವೆ.
ಈ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ಎಲ್ಲಾ ಕಡೆಗಳಲ್ಲಿ ಸಮಸ್ಯೆ ಇದೆ. ಕತಾರ್ ಅರೇಬಿಯಾದಿಂದ ಗ್ಯಾಸ್ ಸಿಲಿಂಡರ್ ಬರುತ್ತದೆ. ಪೆಟ್ರೋಲ್ ಬೇರೆ ದೇಶಗಳಿಂದ ಬರಲಿದೆ. ಎಲ್‌ಪಿಜಿ ತರಲು ನಾಲ್ಕೈದು ದೇಶಗಳ ಜೊತೆ ಮಾತುಕತೆ ನಡೆದಿದೆ. ಇನ್ನು ನಾಲ್ಕೈದು ದಿನಗಳ ನಂತರ ಗ್ಯಾಸ್ ಸಿಲಿಂಡರ್ ಪೂರೈಕೆಯಾಗಲಿದೆ ಎಂದು ಹೇಳಿದರು.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…