Mysore
28
few clouds

Social Media

ಶುಕ್ರವಾರ, 27 ಮಾರ್ಚ್ 2026
Light
Dark

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ.

16 ಸಾವಿರ ಮೆಟ್ರಿಕ್‌ ಟನ್‌ ಎಲ್‌ಪಿಜಿ ಇರುವ ಅಪೋಲೋ ಓಷನ್‌ ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದ್ದು, ಇಳಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ.

ಕತಾರಿನ ರಾಸ್‌ ಲಫಾನ್‌ನಿಂದ 46 ಸಾವಿರ ಮೆಟ್ರಿಕ್‌ ಟನ್‌ ಹೊತ್ತ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಸರಕು ಹಡಗು ಗುಜರಾತಿನ ಮುದ್ರಾ ಬಂದರಿಗೆ ಮಾ.16ಕ್ಕೆ ಬಂದಿತ್ತು. ಈ ಹಡಗು ನಂತರ ಮಂಗಳೂರಿಗೆ ಬರಬೇಕಿತ್ತು. ಆದರೆ ಶಿವಾಲಿಕ್‌ನಲ್ಲಿದ್ದ ಎಲ್ಲಾ ಸರಕನ್ನು ಗುಜರಾತಿನ ಮುದ್ರಾ ಬಂದರಿನಲ್ಲಿ ಇಳಿಸಲಾಗಿತ್ತು. ಅಲ್ಲಿಂದ ಸುಮಾರು 16 ಸಾವಿರ ಮೆಟ್ರಿಕ್‌ ಟನ್‌ ಎಲ್‌ಪಿಜಿಯನ್ನು ಈ ಅಪೋಲೋ ಓಷನ್‌ ಹಡಗಿಗೆ ತುಂಬಿಸಲಾಗಿತ್ತು.

ಬಂದರು ಅಧಿಕಾರಿಗಳು ಇನ್ನೂ ಎರಡು ಕಚ್ಚಾ ತೈಲ ಟ್ಯಾಂಕರ್‌ಗಳು ಶೀಘ್ರದಲ್ಲೇ ಮಂಗಳೂರಿಗೆ ಬರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

Tags:
error: Content is protected !!