ರಾಜ್ಯ

ರಾಜ್ಯ ಬಜೆಟ್‌ ಎಲ್ಲಾ ಸಮುದಾಯಗಳಿಗೂ ಪೂರಕವಾಗಿದೆ: ಎಂ.ಬಿ.ಪಾಟೀಲ್‌

ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್‌ ಎಲ್ಲಾ ಸಮುದಾಯಗಳಿಗೂ ಪೂರಕವಾಗಿದೆ ಎಂದು ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಇಂದು(ಮಾರ್ಚ್.8) ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್‌ನಲ್ಲಿ ಹಿಂದುಳಿದವರು ಮತ್ತು ದಲಿತರಿಗೆ ಅನುದಾನ ನೀಡಿದ್ದೇವೆ. ಅಂತೆಯೇ ಮುಸಲ್ಮಾನರಿಗೂ ಮೀಸಲು ಅನುದಾನ ನೀಡಲಾಗಿದೆ. ಆದರೆ ಈ ಬಾರಿಯ ಬಜೆಟ್‌ ಅನ್ನು ಮುಸಲ್ಮಾನರ ಬಜೆಟ್‌ ಎಂದು ಆರೋಪ ಮಾಡುವವರ ಕಣ್ಣು ಹಳದಿಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ವಿರೋಧ ಪಕ್ಷಗಳಿಗೆ ಯಾವಾಗಲೂ ಮುಸಲ್ಮಾನರ ಸಮುದಾಯ ಯಾಕೆ ಕಾಣುತ್ತದೆ ಎಂಬುದು ತಿಳಿದಿಲ್ಲ. ಆದರೆ ಬಿಜೆಪಿ ಅಧಿಕಾರದಲ್ಲಿದ್ದ ನಾಲ್ಕು ವರ್ಷ ಏನು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಸರಿಯಾಗಿಯೇ ಹೇಳಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಬಿಜೆಪಿ ಶಾಸಕ ಯತ್ನಾಳ್‌ ಅವರು ಹಲಾಲ್‌ ಬಜೆಟ್‌ ಎಂದು ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಹಲಾಲ್‌ ಬಜೆಟ್‌ ಎಂದು ಹೇಳಿರುವವರೇ ಹಲಾಲ್‌ ತಿನ್ನುತ್ತಿರುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

4 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

5 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

5 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

5 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

5 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

5 hours ago