Mysore
24
mist

Social Media

ಸೋಮವಾರ, 17 ನವೆಂಬರ್ 2025
Light
Dark

ಸಿಎಂ ಹುದ್ದೆ ಖಾಲಿ ಇಲ್ಲ, ಸಿದ್ದರಾಮಯ್ಯ ಅವರೇ ಪೂರ್ಣ ಅವಧಿಯವರೆಗೂ ಮುಖ್ಯಮಂತ್ರಿ: ಎಂ.ಬಿ.ಪಾಟೀಲ್‌

ವಿಜಯನಗರ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಅವರ ಅವಧಿ ಪೂರ್ಣವಾಗುವರೆಗೂ ಅವರೇ ಸಿಎಂ ಆಗಿರುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ವಿಜಯನಗರದಲ್ಲಿ ಇಂದು(ಜನವರಿ.11) ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರ ಹಂಚಿಕೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೇ ಮುಖ್ಯಮಂತ್ರಿ ಹುದ್ದೆಯನ್ನು ಎರಡೂವರೆ ವರ್ಷದ ನಂತರ ಬಿಟ್ಟುಕೊಡುವ ಬಗ್ಗೆ ಆಗಿರುವ ಒಪ್ಪಂದವೂ ಸಹ ತಿಳಿದಿಲ್ಲ. ನನಗೆ ಗೊತ್ತಿರುವ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರೇ ಇನ್ನುಳಿದ ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಇನ್ನೂ ಡಿನ್ನರ್‌ ಪಾರ್ಟಿ ಕುರಿತಂತೆ ಮಾತನಾಡಿದ ಅವರು, ನಮ್ಮ ಪಕ್ದದ ಶಾಸಕರು ಡಿನ್ನರ್‌ ಪಾರ್ಟಿ ಮಾಡುವುದರಲ್ಲಿ ತಪ್ಪೇನಿದೆ. ಹೀಗಾಗಿ ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.

Tags:
error: Content is protected !!