ವಿಜಯನಗರ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಅವರ ಅವಧಿ ಪೂರ್ಣವಾಗುವರೆಗೂ ಅವರೇ ಸಿಎಂ ಆಗಿರುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಜಯನಗರದಲ್ಲಿ ಇಂದು(ಜನವರಿ.11) ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರ ಹಂಚಿಕೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೇ ಮುಖ್ಯಮಂತ್ರಿ ಹುದ್ದೆಯನ್ನು ಎರಡೂವರೆ ವರ್ಷದ ನಂತರ ಬಿಟ್ಟುಕೊಡುವ ಬಗ್ಗೆ ಆಗಿರುವ ಒಪ್ಪಂದವೂ ಸಹ ತಿಳಿದಿಲ್ಲ. ನನಗೆ ಗೊತ್ತಿರುವ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರೇ ಇನ್ನುಳಿದ ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನೂ ಡಿನ್ನರ್ ಪಾರ್ಟಿ ಕುರಿತಂತೆ ಮಾತನಾಡಿದ ಅವರು, ನಮ್ಮ ಪಕ್ದದ ಶಾಸಕರು ಡಿನ್ನರ್ ಪಾರ್ಟಿ ಮಾಡುವುದರಲ್ಲಿ ತಪ್ಪೇನಿದೆ. ಹೀಗಾಗಿ ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…