eshwar khandre
ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮೈಸೂರು ವಿಭಾಗದ ಅರಣ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು, ಈಗಾಗಲೇ ವನ್ಯಜೀವಿ ಮಂಡಳಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ತಿಳಿಸಿದರು.
ಅರಣ್ಯ ಪ್ರದೇಶದೊಳಗೆ ಇರುವ ಹಾಡಿಗಳಲ್ಲಿರುವ ದನಕರುಗಳೆಷ್ಟು, ಈ ಹಾಡಿಗಳಲ್ಲಿ ಎಷ್ಟು ಜನರಿದ್ದಾರೆ ಎಂಬ ಬಗ್ಗೆ ಸಂಪೂರ್ಣ ದತ್ತಾಂಶ ಕಲೆ ಹಾಕಿ ದಾಖಲಿಸಲು ಮತ್ತು ಒಂದೊಮ್ಮೆ ಹಾಡಿಯಲ್ಲಿರುವ ದನಕರುಗಳು ವನ್ಯಜೀವಿಯಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು.
ಜಾಗೃತಿ ಮೂಡಿಸಿ:
ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿಧಾಮದ ಅಂಚಿನ ಗ್ರಾಮಗಳಲ್ಲಿ ಮತ್ತು ಅರಣ್ಯದ ಹಾಡಿಯ ಬಳಿ ವನ್ಯಜೀವಿಗಳಿಗೆ ವಿಷ ಹಾಕುತ್ತಿರುವ ಘಟನೆಗಳು ಮತ್ತು ಕಳ್ಳಬೇಟೆ ಪ್ರಕರಣಗಳು ವರದಿಯಾಗುತ್ತಿದ್ದು, ಅರಣ್ಯವಾಸಿಗಳು ಮತ್ತು ಕಾಡಿನಂಚಿನ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುವಂತೆ ಹಾಗೂ ವನ್ಯಜೀವಿಗಳಿಂದ ಬೆಳೆ ಹಾನಿ ಆಗಿದ್ದಲ್ಲಿ ಪರಿಶೀಲಿಸಿ, ಪರಿಹಾರ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮೂಲಸೌಕರ್ಯ ಒದಗಿಸಲು ಸೂಚನೆ:
ಹೊರಗುತ್ತಿಗೆಯ ಮುಂಚೂಣಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿ ಆಗುತ್ತಿದೆಯೇ ಇಲ್ಲವೇ, ಇವರು ಸರಿಯಾಗಿ ಗಸ್ತು ನಡೆಸುತ್ತಿದ್ದಾರೋ ಇಲ್ಲವೋ, ಎಂಸ್ಟ್ರೈಪ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಸಚಿವರು ಸೂಚಿಸಿದರು.
ಸಿಬ್ಬಂದಿ ಗಸ್ತು ತಿರುಗುತ್ತಿರುವ ಕುರಿತಂತೆ ಜಿಪಿಎಸ್ ಸಹಿತ ಫೋಟೋ ತೆಗೆಯಲು ಸೂಚಿಸಿ, ಅದನ್ನು ಹಿರಿಯ ಅಧಿಕಾರಿಗಳು ಆಗಾಗ್ಗೆ ಪರಾಮರ್ಶಿಸಬೇಕು, ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದೂ ಈಶ್ವರ ಖಂಡ್ರೆ ತಿಳಿಸಿದರು.
ಇದನ್ನೂ ಓದಿ:-ಹುಲಿ ಹತ್ಯೆ ಪ್ರಕರಣ : ಓರ್ವ ವ್ಯಕ್ತಿ ವಶಕ್ಕೆ
ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿರುವ ಸಿಬ್ಬಂದಿಗೆ ಬೂಟು, ಜಾಕೆಟ್, ಕುಡಿಯುವ ನೀರು, ಆಹಾರ ಧಾನ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲೂ ಸಚಿವರು ಸೂಚನೆ ನೀಡಿದರು.
ಚನ್ನಪಟ್ಟಣ ಆನೆ ಸಾವಿನ ಬಗ್ಗೆ ಪರಾಮರ್ಶೆ:
ಚನ್ನಪಟ್ಟಣದ ಗೊಲ್ಲರದೊಡ್ಡಿಯ ಬಳಿ ಇಂದು ತೆಂಗಿನಮರದ ಹೊಂಬಾಳೆ ತಿನ್ನಲು ಯತ್ನಿಸಿದ ಆನೆಯೊಂದು ಪಕ್ಕದಲ್ಲಿದ್ದ ವಿದ್ಯುತ್ ಕಂಬದ ತಂತಿ ಸ್ಪರ್ಶದಿಂದ ಮೃತಪಟ್ಟಿರುವ ಕುರಿತಂತೆಯೂ ಸಭೆಯಲ್ಲಿ ಪರಾಮರ್ಶಿಸಲಾಯಿತು.
ಪ್ರತಿ ವರ್ಷ ಸರಾಸರಿ ವಿದ್ಯುತ್ ಸ್ಪರ್ಶದಿಂದ 14 ಆನೆಗಳು ಮೃತಪಡುತ್ತಿವೆ. ಆದರೆ ಈ ವರ್ಷ 7 ಆನೆಗಳು ಮಾತ್ರ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿವೆ. ರೈತರಿಗೆ, ತೋಟದ ಮಾಲೀಕರಿಗೆ ಬೇಲಿಯ ತಂತಿಗೆ ಅಕ್ರಮವಾಗಿ ವಿದ್ಯುತ್ ಹರಿಸದಂತೆ ಮನವಿ ಮಾಡಲಾಗಿದೆ. ತಪಾಸಣೆ ನಡೆಲಾಗುತ್ತಿದೆ ಎಂದೂ ಸಭೆಗೆ ಅಧಿಕಾರಿಗಳು ತಿಳಿಸಿದರು.
ಆನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗದಂತೆ ಹಾಗೂ ಅರಣ್ಯ ಪ್ರದೇಶದಲ್ಲಿ ಅಥವಾ ಅರಣ್ಯದಂಚಿನಲ್ಲಿ ತೂಗಾಡುತ್ತಿರುವ ಅಥವಾ ಜೋತು ಬಿದ್ದಿರುವ ವಿದ್ಯುತ್ ತಂತಿಯ ದುರಸ್ತಿ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳಿಗೆ ಪತ್ರ ಬರೆದು ಕ್ರಮ ವಹಿಸಲು ಸೂಚಿಸುವಂತೆ ತಿಳಿಸಿದರು.
ಸಭೆಯಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ ಮತ್ತಿತರರು ಪಾಲ್ಗೊಂಡಿದ್ದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…