ರಾಜ್ಯ

ಅಶೋಕ್‌ಗೆ ಮೈತ್ರಿ ನಾಯಕರನ್ನು ಪ್ರಶ್ನಿಸಲು ಸಾಧ್ಯವೇ : ಕಾಂಗ್ರೆಸ್‌

ಮೈಸೂರು : ಪದೇ ಪದೇ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ಟೀಕಿಸಿದಂತೆ ಅವರದೇ ಮೈತ್ರಿ ಪಕ್ಷದ ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಟೀಕಿಸಲು ಸಾಧ್ಯವೇ ಎಂದು ಕೆಪಿಸಿಸಿ ರಾಜ್ಯ ಕಾಂಗ್ರೆಸ್ ಸಂಶೋಧನ ವಿಭಾಗದ ಸಂಚಾಲಕ ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಸಂಶೋಧನ ವಿಭಾಗದ ಅಧ್ಯಕ್ಷ ಡಾ.ಎಂ ನಾಗರಾಜ್ ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪದೇ ಪದೇ ಮಲ್ಲಿಕಾರ್ಜುನ ಖರ್ಗೆ ಒಬ್ಬ ಅಚಾನಕ್ಕಾಗಿ ಕಾಂಗ್ರೆಸ್ ಪಕ್ಷದ ರಾಷ್ಟೀಯ ಅಧ್ಯಕ್ಷರಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರ ಮಟ್ಟದಲ್ಲಿರುವ ಒಬ್ಬ ದಲಿತ ನಾಯಕ ರಾಷ್ಟೀಯ ಪಕ್ಷದ ಅಧ್ಯಕ್ಷರಾಗುವುದು ಸಾಮಾನ್ಯ ವಿಷಯವಲ್ಲ, ಆದರೆ ಆರ್ ಅಶೋಕ್ ಅವರು ಖರ್ಗೆ ಅವರ ಹಿರಿಮೆ ಹಾಗೂ ರಾಜಕೀಯ ಅನುಭವವನ್ನು ತಿಳಿಯದೆ ಅವರ ಬಗ್ಗೆ ವ್ಯಂಗ್ಯದ ಮಾತುಗಳನಾಡುತ್ತಾರೆ.

ಆರ್ ಅಶೋಕ್ ಅವರಿಗೆ ಧೈರ್ಯವಿದ್ದರೆ ಅವರದೇ ಮೈತ್ರಿ ಪಕ್ಷದ ರಾಜ್ಯದ ಇಬ್ಬರು ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಅಚಾನಕ್ಕಾಗಿ ಪ್ರಧಾನಿಯಾದರು ಹಾಗೂ ಅವರ ಪುತ್ರ ಹೆಚ್ ಡಿ ಕುಮಾರಸ್ವಾಮಿ ಅವರು ಸಹ ಪೂರ್ಣ ಬಹುಮತ ಪಡೆಯದೇ ಅಚಾನಕ್ಕಾಗಿ ಎರಡು ಬಾರೀ ರಾಜ್ಯದ ಮುಖ್ಯಮಂತ್ರಿಯಾಗಿದ್ದರು, ಈಗೀರುವಾಗ ಈ ಇಬ್ಬರು ನಾಯಕರನ್ನು ಆರ್ ಅಶೋಕ್ ಅಚಾನಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿಯಾದವರು ಎಂದು ಹೇಳುವ ಧೈರ್ಯ ತೋರಲಿ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶೋಷಿತ ಸಮುದಾಯದಿಂದ ಎದ್ದು ಬಂದ ನಾಯಕ, ಅಸ್ಪೃಶ್ಯತೆ ನಡುವೆ ದೇಶದ ರಾಜಕಾರಣದಲ್ಲಿ ಒಂದು ರಾಷ್ಟೀಯ ಪಕ್ಷದ ನಾಯಕರಾಗುವುದು ಸಾಮಾನ್ಯದ ಮಾತಲ್ಲ, ಹೀಗಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಪದೇ ಪದೇ ಟೀಕಿಸುವುದನ್ನು ಆರ್ ಅಶೋಕ್ ನಿಲ್ಲಿಸಬೇಕು, ಇಲ್ಲವಾದರೆ ನಮ್ಮ ಸಮುದಾಯದಿಂದ ರಾಜ್ಯದ್ಯಂತ ಆರ್ ಅಶೋಕ್ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಡಾ ಎಂ ನಾಗರಾಜ್ ಎಚ್ಚರಿಕೆಯನ್ನು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

47 mins ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

56 mins ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

59 mins ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

1 hour ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

1 hour ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

2 hours ago