MA Saleem
ಬೆಂಗಳೂರು: ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಕನ್ನಡಿಗ ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್.30ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ.21ರವರೆಗೆ ವಿಸ್ತರಣೆ ಮಾಡಲಾಗಿತ್ತು.
ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ ಡಾ.ಎಂ.ಎ.ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.
1966ರ ಜೂನ್.22ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಸಲೀಂ ಅವರು, 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದರು. 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…