Mysore
36
few clouds

Social Media

ಗುರುವಾರ, 23 ಏಪ್ರಿಲ 2026
Light
Dark

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ.

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಶಾಖ ಪ್ರಮಾಣ ಹೆಚ್ಚಳವಾಗಿದ್ದು, ಚರ್ಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದಿದ್ದು, ಉತ್ತರ ಕರ್ನಾಟಕದಲ್ಲಿ ಶಾಖದ ತೀವ್ರತೆ ಹೆಚ್ಚಾಗಲಿದೆ. ಮಲೆನಾಡು, ಕರಾವಳಿಯಲ್ಲೂ ಬಿಸಿಲಿನ ಝಳ ಅಧಿಕವಾಗಲಿದೆ.

ಕಲಬುರ್ಗಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್‌ನಿಂದ 37 ಡಿಗ್ರಿ ಸೆಲ್ಸಿಯಸ್‌ವರೆಗೂ ಏರಿಕೆಯಾಗುವ ಸಾಧ್ಯತೆಯಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹಿತಕರ ವಾತಾವರಣವಿರಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಚರ್ಮದ ಬಗ್ಗೆ ಎಚ್ಚರಿಕೆ ವಹಿಸಬೇಕು. ಜೊತೆಗೆ ಎಳನೀರು ಸೇರಿದಂತೆ ಹೆಚ್ಚು ಹೆಚ್ಚು ತಂಪು ಪಾನೀಯಗಳನ್ನು ಕುಡಿಯಬೇಕು ಎಂದು ಸಲಹೆ ನೀಡಿದೆ.

Tags:
error: Content is protected !!