ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ.
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಶಾಖ ಪ್ರಮಾಣ ಹೆಚ್ಚಳವಾಗಿದ್ದು, ಚರ್ಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದಿದ್ದು, ಉತ್ತರ ಕರ್ನಾಟಕದಲ್ಲಿ ಶಾಖದ ತೀವ್ರತೆ ಹೆಚ್ಚಾಗಲಿದೆ. ಮಲೆನಾಡು, ಕರಾವಳಿಯಲ್ಲೂ ಬಿಸಿಲಿನ ಝಳ ಅಧಿಕವಾಗಲಿದೆ.
ಕಲಬುರ್ಗಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್‌ನಿಂದ 37 ಡಿಗ್ರಿ ಸೆಲ್ಸಿಯಸ್‌ವರೆಗೂ ಏರಿಕೆಯಾಗುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹಿತಕರ ವಾತಾವರಣವಿರಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಚರ್ಮದ ಬಗ್ಗೆ ಎಚ್ಚರಿಕೆ ವಹಿಸಬೇಕು. ಜೊತೆಗೆ ಎಳನೀರು ಸೇರಿದಂತೆ ಹೆಚ್ಚು ಹೆಚ್ಚು ತಂಪು ಪಾನೀಯಗಳನ್ನು ಕುಡಿಯಬೇಕು ಎಂದು ಸಲಹೆ ನೀಡಿದೆ.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…