Mysore
20
clear sky

Social Media

ಸೋಮವಾರ, 09 ಮಾರ್ಚ್ 2026
Light
Dark

ಮದ್ದೂರಿನಲ್ಲಿ ಕಲ್ಲು ತೂರಾಟ ಪ್ರಕರಣ: ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಗಲಾಟೆಯಾಗಿದೆ. ಮಸೀದಿ ಬಳಿ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ಪ್ರಕರಣ ನಡೆದಿದೆ. ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ ಎಂದು ಹೇಳಿದರು.

ಇನ್ನು ಮದ್ದೂರು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿರಲಿ, ಹಿಂದೂ ಆಗಿರಲಿ, ಮುಸ್ಲಿಂ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಮಂಡ್ಯಕ್ಕೆ ತೆರಳುತ್ತಿದ್ದಾರೆ. ಅವರು ವರದಿ ನೀಡಿದ ಬಳಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Tags:
error: Content is protected !!