ಬೆಂಗಳೂರು: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಗಲಾಟೆಯಾಗಿದೆ. ಮಸೀದಿ ಬಳಿ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ಪ್ರಕರಣ ನಡೆದಿದೆ. ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ಹೇಳಿದರು.
ಇನ್ನು ಮದ್ದೂರು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿರಲಿ, ಹಿಂದೂ ಆಗಿರಲಿ, ಮುಸ್ಲಿಂ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಮಂಡ್ಯಕ್ಕೆ ತೆರಳುತ್ತಿದ್ದಾರೆ. ಅವರು ವರದಿ ನೀಡಿದ ಬಳಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…