madenoor manu
ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನು ಇದೀಗ ವಿಡಿಯೋವೊಂದನ್ನು ಹರಿಬಿಟ್ಟು, ಹೊಸ ಬಾಂಬ್ ಸಿಡಿಸಿದ್ದಾರೆ.
ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ವಿಡಿಯೋ ಹರಿಬಿಟ್ಟಿರುವ ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಹೀಗಿರುವಾಗ ಎಫ್‌ಐಆರ್ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ರೂ ಬೇರೆಯವರು ಬಿಡ್ತಿಲ್ಲ. ಈ ರೀತಿ ಮಾಡು ಎಂದು ಹೇಳಿಕೊಡ್ತಿದ್ದಾರೆ ಎಂದು ಅವಳೇ ಹೇಳಿದ್ದಳು. ಯಾರ್ಯಾರು ಹೇಳಿಕೊಡ್ತಿದ್ದಾರೆ ಎಂದು ಕೂಡ ನನ್ನ ಬಳಿ ಬಾಯಿಬಿಟ್ಟಿದ್ದಾಳೆ ಎಂದಿದ್ದಾರೆ. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡುತ್ತೇನೆ ಎಂದು ವಿಡಿಯೋದಲ್ಲಿ ಮಡೆನೂರು ಮನು ಹೇಳಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…