ರಾಜ್ಯ

ಮಧು ಬಂಗಾರಪ್ಪರಿಂದ ಕನ್ನಡ ವಿರೋಧಿ ನೀತಿ: ಕೇಂದ್ರ ಸಚಿವ ವಿ.ಸೋಮಣ್ಣ ಆಕ್ರೋಶ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳ ಬದಲು 100 ಅಂಕಗಳಿಗೆ ಇಳಿಸುವ ನಿರ್ಧಾರ ತೆಗೆದುಕೊಂಡಿರುವುದನ್ನು ಖಂಡಿಸಿರುವ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು, ತಕ್ಷಣ ಈ ನಿರ್ಧಾರವನ್ನು ವಾಪಸ್ಸು ಪಡೆದು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಡಪರ ಹೋರಾಟಕ್ಕೊಂದು ಸಂವೇದನಾ ಪರಂಪರೆ ಮತ್ತು ಇತಿಹಾಸವಿದೆ. ಈ ಇತಿಹಾಸದ ಅರಿವಿರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಂತಹ ಕನ್ನಡ ವಿರೋಧಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂದು ಕನ್ನಡದ ಕಣ್ಮಣಿ, ವರನಟ ಡಾ. ರಾಜಕುಮಾರ್ ನೇತೃತ್ವದಲ್ಲಿ ಹಾಗೂ ಅನೇಕ ಕನ್ನಡದ ಕಟ್ಟಾಳುಗಳ ಆಸರೆಯಲ್ಲಿ ನಡೆದ ಐತಿಹಾಸಿಕ ಗೋಕಾಕ್ ಚಳವಳಿಯ ಕನ್ನಡ ಪರ ಆಂದೋಲನದ ಪ್ರತಿಫಲವಾಗಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳನ್ನು ನಿಗದಿಪಡಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.‌

ಇಂತಹ ಹೋರಾಟದ ಹಿನ್ನೆಲೆಯಲ್ಲಿ ಜಾರಿಗೆ ಬಂದ ಕನ್ನಡದ 125 ಅಂಕಗಳನ್ನು ಇತಿಹಾಸದ ಪ್ರಜ್ಞೆಯಿಲ್ಲದೆ 100 ಅಂಕಗಳಿಗೆ ಇಳಿಸುವ ನಿರ್ಧಾರ ಮೂರ್ಖತನದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

11 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

13 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

14 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

15 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

16 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

17 hours ago