ಬೆಂಗಳೂರು: ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ನಾಗವಾರದಲ್ಲಿ ಈ ಘಟನೆ ನಡೆದಿದ್ದು, ವಿನಯ್ ಸೋಮಣ್ಣ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.
ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್‌ನೋಟ್ ಪೋಸ್ಟ್ ಮಾಡಿರುವ ಅವರು, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣದ ಮಾಹಿತಿ ಪಡೆದಿದ್ದಾರೆ.
ಘಟನೆಗೆ ಕಾರಣ: ವಿನಯ್ ಸೋಮಣ್ಣ ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಮುಖಂಡ ತನ್ವೀರ್ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಣ್ಣ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ತೀವ್ರ ಮನನೊಂದಿದ್ದ ವಿನಯ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…