ರಾಜ್ಯ

ಆಹಾರ ಪ್ರಿಯರಿಗೆ ಶಾಕಿಂಗ್‌ ಸುದ್ದಿ: ಜನವರಿ.1ರಿಂದ ಮ್ಯಾಗಿ ಬೆಲೆ ದುಬಾರಿಯಾಗೋದು ಪಕ್ಕಾ

ಬೆಂಗಳೂರು: ಆಹಾರ ಪ್ರಿಯರಿಗೆ ಶಾಕಿಂಗ್‌ ಸುದ್ದಿ ಎದುರಾಗಿದ್ದು, ಲಕ್ಷಾಂತರ ಭಾರತೀಯರು ಇಷ್ಟಪಡುವ ಐಕಾನಿಕ್‌ ಮ್ಯಾಗಿ ಶೀಘ್ರದಲ್ಲೇ ದುಬಾರಿಯಾಗಲಿದೆ.

ಈ ನಿರೀಕ್ಷಿತ ಬೆಲೆಯ ಏರಿಕೆಯು ಅಂತರಾಷ್ಟ್ರೀಯ ವ್ಯಾಪಾರ ಸಂಬಂಧಗಳಲ್ಲಿನ ಮಹತ್ವದ ಬೆಳವಣಿಗೆಗೆ ಸಂಬಂಧಿಸಿದೆ.

ಸ್ವಿಟ್ಜರ್ಲೆಂಡ್‌ ತನ್ನ 1994ರ ಡಬಲ್‌ ಟ್ಯಾಕ್ಸೇಶನ್‌ ಅವಾಯ್ಡನ್ಸ್‌ ಅಗ್ರಿಮೆಂಟ್‌ ಅಡಿಯಲ್ಲಿ ಭಾರತದೊಂದಿಗೆ ಜನವರಿ.1,2025ರಿಂದ ಜಾರಿಗೆ ಬರುವಂತೆ ಮೋಸ್ಟ್‌ ಫೇವರ್ಡ್‌ ನೇಷನ್‌ ಷರತ್ತನ್ನು ಅಮಾನತುಗೊಳಿಸಲು ನಿರ್ಧರಿಸಿದೆ.

ಈ ನಿರ್ಧಾರವು ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ನೆಸ್ಲೆ ಮ್ಯಾಗಿ ಸೇರಿದಂತೆ ಸ್ವಿಸ್‌ ಕಂಪನಿಗಳಿಗೆ ವೆಚ್ಚವನ್ನು ಹೆಚ್ಚಿಸಲು ಕಾರಣವಾಗಬಹುದು.

ಈ ವಿವಾದದ ಮೂಲ 2023ರ ಭಾರತದ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿದೆ. ಇದು DTAAನಲ್ಲಿರುವ MFN ಷರತ್ತು ಸ್ವಯಂಚಾಲಿತವಾಗಿ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇತರ ರಾಷ್ಟ್ರಗಳೊಂದಿಗೆ ಭಾರತದ ಒಪ್ಪಂದಗಳ ಆಧಾರದ ಮೇಲೆ 5% ಕಡಿಮೆ ತೆರಿಗೆ ದರವನ್ನು ಕೋರಿದ ನೆಸ್ಲೆ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕಾರ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಜನವರಿಯಿಂದಲೇ ಮ್ಯಾಗಿ ನ್ಯೂಡಲ್ಸ್‌ ಮತ್ತು ಇತರೆ ನೆಸ್ಲೆ ಉತ್ಪನ್ನಗಳು ಬೆಲೆಯನ್ನು ಹೆಚ್ಚಿಸುತ್ತವೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

23 mins ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

24 mins ago

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

49 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

1 hour ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

1 hour ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

2 hours ago