ಬೆಳಗಾವಿ : ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆದಿರುವ ಹಿನ್ನೆಲೆ ಇಂದು ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಿದೆ.
ಕೇಂದ್ರದಿಂದ ಪರಿಸರ ಇಲಾಖೆ ಅನುಮತಿ ಸಿಗದಂತೆ ನೋಡಿಕೊಳ್ಳಲು ಕುತಂತ್ರ ರೂಪಿಸಿದ್ದು, ಇದರ ಭಾಗವಾಗಿಯೇ ಮಹಾನದಿ ಜಲನಯನ ಪ್ರದೇಶಕ್ಕೆ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯದ ಅಧಿಕಾರಿಗಳು ಒಳಗೊಂಡ ಸದಸ್ಯರ ತಂಡ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿಗೆ ಭೇಟಿ ನೀಡಿದೆ.
ಕಳಸಾ ಮತ್ತು ಬಂಡೂರಿ ನಾಲೆ ಉಗಮ ಸ್ಥಾನಕ್ಕೆ ಭೇಟಿ ನೀಡಿದ್ದು ಎರಡೂ ನಾಲೆಯ ನೀರಿನ ಹಲವು ಪರಿಶೀಲನೆ ನಡೆಸಲಿದೆ. ಅಲ್ಲದೆ ಮಹದಾಯಿ ಯೋಜನೆಯ ಕಾಮಗಾರಿಯನ್ನು ಸಹ ಪರಿಶೀಲಿಸಲಿದೆ. ಅಲ್ಲದೆ ಹುಲಿ ಸಂರಕ್ಷಿತಾ ಅರಣ್ಯ ನಿಜವಾಗಿಯೂ ಕಳಸಾ ಅಥವಾ ಬಂಡೂರಿ ನಾಲ ಉಗಮ ಸ್ಥಳದಲ್ಲಿದಿಯಾ..? ಕಾಮಗಾರಿ ಮಾಡುವುದರಿಂದ ಪರಿಸರಕ್ಕೆ ದಕ್ಕೆ ಆಗಲಿದೆಯಾ..? ಹಿಂದಿನ ಬಿಜೆಪಿ ಸರ್ಕಾರ ಪರಿಸರ ದೃಷ್ಟಿಯಲ್ಲಿಟ್ಟುಕೊಂಡು ಡಿಪಿಆರ್ ಬದಲಾವಣೆ ಮಾಡಿದ್ದು ಅದರಿಂದ ಏನೆಲ್ಲಾ ಆಗಲಿದೆ ಅಂತ ಮಾಹಿತಿ ಸಂಗ್ರಹಿಸಲಿದೆ. ಜೊತೆಗೆ ಎಲ್ಲಾ ವರದಿಯನ್ನ ಪಡೆದುಕೊಂಡು ನಾಳೆ ಬೆಂಗಳೂರಿನಲ್ಲಿ ಸಭೆ ಮಾಡಿ ಚರ್ಚೆ ಮಾಡಲಿದ್ದಾರೆ. ಬಳಿಕ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ತಂಡ ವರದಿ ಸಲ್ಲಿಸಲಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…