ಬೆಳಗಾವಿ : ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ತೀವ್ರ ಮುಖಭಂಗ ಆಗಿದೆ.
ಗೋವಾ ಸಿಎಂ ಪ್ರಮೋದ್ ಸಾವಂತ್ ತಮ್ಮ ಎಕ್ಸ್ ಖಾತೆಯಲ್ಲಿ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಮಹದಾಯಿ ಜಲಾನಯನ ಪ್ರದೇಶದಲ್ಲಿ ಯಾವುದೇ ಅನುಮತಿಯನ್ನು ಪಡೆಯದೆ ಕರ್ನಾಟಕ ಮಹದಾಯಿ ಕಾಮಗಾರಿಯನ್ನು ಆರಂಭಿಸಿದೆ ಎಂದು ಆರೋಪ ಮಾಡಿದ್ದರು.
ಬಳಿಕ ಗೋವಾ ಸಿಎಂ ಆರೋಪದ ಬೆನ್ನಲ್ಲೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಸಂದರ್ಭವೂ ಕೂಡ ಕರ್ನಾಟಕದ ಕೃತ್ಯ ತಂಡದ ಮುಂದೆ ಬಯಲಾಗುತ್ತದೆ ಎಂದು ಪ್ರಮೋದ್ ಸಾವಂತ್ ಹೇಳಿದ್ದರು. ಅಸಲಿಗೆ ಅಲ್ಲಿ ಆದದ್ದು ಬೇರೆ. ಯಾಕೆಂದರೆ ಕಣಕುಂಬಿ ಬಳಿಯ ಜಲಾನಯನ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದ ಕೇಂದ್ರದ ತಂಡಕ್ಕೆ ಅಲ್ಲಿ ಯಾವುದೇ ಕಾಮಗಾರಿ ನಡೆಯದೆ ಇರುವುದು ದೃಢವಾಗಿದೆ. ಈ ಮೂಲಕ ಗೋವಾ ಸಿಎಂಗೆ ಮುಖಭಂಗವಾಗಿದೆ.
ಗೋವಾ ಸರ್ಕಾರ ಮಹದಾಯಿ ವಿಚಾರದಲ್ಲಿ ಕ್ಯಾತೆ ತೆಗೆಯುವುದು ಇದೇ ಮೊದಲೇನು ಅಲ್ಲ ಬಿಡಿ. ಪದೇ ಪದೇ ಒಂದಲ್ಲ ಒಂದು ರೀತಿ ಕ್ಯಾತೆ ತೆಗೆಯುತ್ತಲೆ ಬರುತ್ತಿದೆ. ಮೊದಲಿನಿಂದಲೂ ಕೂಡ ಮಹಾದಾಯಿ ಯೋಜನೆ ಜಾರಿಗೆ ಗೋವ ಸರ್ಕಾರ ಅಡ್ಡಗಾಲು ಹಾಕುತ್ತಾ ಬಂದಿದೆ. ಮಹದಾಯಿ ನ್ಯಾಯಧೀಕರಣ, ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದರೂ ಕೂಡ ಯಾವುದು ಜಾರಿಯಾಗುತ್ತಿಲ್ಲ. ಇದಷ್ಟೆ ಅಲ್ಲದೆ ಕೇಂದ್ರ ಅರಣ್ಯ ವನ್ಯಜೀವಿ ಹಾಗೂ ಪರಿಸರ ಇಲಾಖೆಯ ಅನುಮತಿಗೂ ಅಡ್ಡಗಾಲು ಹಾಕುತ್ತಿದ್ದು, ೫ ದಶಕಗಳ ಕಾಲ ಹೋರಾಟ ಮಾಡಿದರೂ ಸಹ ಮಲಪ್ರಭಾ ನದಿ ಪಾತ್ರದ ಜನರಿಗೆ ಒಂದೇ ಒಂದು ಹನಿ ನೀರು ಸಿಗದೆ ಇರುವುದು ನಿಜಕ್ಕೂ ಬೇಸರ ಸಂಗತಿಯಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…