ರಾಜ್ಯ

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 23 ದಿನಗಳ ಅವಧಿಯಲ್ಲಿ 2.33 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 6 ಗಂಟೆಯವರೆಗೂ ನಡೆಯಿತು.

ಯುಗಾದಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನ, ಅಮಾವಾಸ್ಯೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಮೂಲಕ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,33,84,201 ನಗದು 21 ಗ್ರಾಂ ಚಿನ್ನ ಹಾಗೂ 800 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇ-ಹುಂಡಿಯಿಂದ 5,78,897 ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3 ನೋಟುಗಳು, ವಿದೇಶಿ 4 ನೋಟುಗಳನ್ನು ಹುಂಡಿಯಲ್ಲಿ ಹಾಕಿದ್ದಾರೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು,ಉಪ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾಡಳಿತ ಕಚೇರಿಯ ಮಹೇಶ್ ಚಂದ್ರ, ನಾಮ ನಿರ್ದೇಶಿತ ಸದಸ್ಯರುಗಳಾದ ಮರಿಸ್ವಾಮಿ, ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರರಾದ ಮಹದೇವ್,ಲೆಕ್ಕಾದೀಕ್ಷಕರಾದ ಗುರುಮಲ್ಲಯ್ಯ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

49 mins ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

1 hour ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

2 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

2 hours ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

2 hours ago