ಬೆಂಗಳೂರು: ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ದೇವೇಗೌಡರ ಸಂತಾಪ
ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಂತಾಪ ಸಲ್ಲಿಸಿದ್ದಾರೆ.
ಸ್ವಾಮೀಜಿ ಅವರು ವಿವಶರಾದ ಸುದ್ದಿ ತಿಳಿದು ಅತೀವ ದುಃಖವುಂಟಾಗಿದೆ. ಸ್ವಾಮೀಜಿಗಳು ದೇಶದಾದ್ಯಂತ ಅಪಾರ ಭಕ್ತ ವರ್ಗ ಹೊಂದಿದ್ದರು. ಅವರ ನಿಧನದಿಂದ ಧಾರ್ಮಿಕ ಕ್ಷೇತ್ರಕ್ಕೆ ಬಹಳ ನಷ್ಟವಾಗಿದೆ. ಸ್ವಾಮೀಜಿಗಳ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುವುದಾಗಿ ಗೌಡರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸ್ವಾಮೀಜಿಗಳು ಕನ್ನಡ, ಸಂಸ್ಕತ ಮತ್ತು ಜೈನ ಧರ್ಮಶಾಸ್ತ್ರದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದರು. 1970ರಿಂದ ಶ್ರವಣಬೆಳಗೊಳ ಮಠದ ಪೀಠಾಪತಿಗಳಾಗಿ ಅವರು ಸೇವೆ ಸಲ್ಲಿಸಿದ್ದರು.ಹಲವು ಸಾಮಾಜಿಕ ಕೈಂಕರ್ಯಗಳಲ್ಲಿ ತೊಡಗಿಕೊಂಡಿದ್ದ ಸ್ವಾಮೀಜಿ ಅವರ ಸಮ್ಮುಖದಲ್ಲಿ 12 ವರ್ಷಕ್ಕೊಮ್ಮೆ ಮಹಾಮಸ್ತಕಾಭೀಷೇಕ ಯಶಸ್ವಿಯಾಗಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ಸಕಲ ಸರ್ಕಾರಿ ಗೌರವಗಳೊಂದಿಗೆ ಮಹಾಸ್ವಾಮೀಜಿ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Articleನಾಲ್ಕು ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ