ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 1942ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಂಡಿತು.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದರು.
ಗಾಂಧೀಜಿಯ 25 ಅಡಿಯ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗಿದ್ದು, ಈ ಪ್ರತಿಮೆಗೆ 20 ಟನೆ ಕಂಚನ್ನು ಬಳಸಲಾಗಿದೆ. ಈ ಪ್ರತಿಮೆಯನ್ನು ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿದ್ದಾರೆ.
ಬೆಳಗಾವಿಯಲ್ಲಿಂದು ಭಾರತ ಗಾಂಧಿ ಸಮಾವೇಶ ಆಯೋಜಿಸಲಾಗಿದ್ದು, ಚರಕ ತಿರುಗಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಗಾಂಧೀಜಿ ಪುತ್ಥಳಿ ಅನಾವರಣ ಮಾಡಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಸಂಸದೆ ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.