ರಾಜ್ಯ

ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಅಬ್ಬರ: ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 1942ರ ಬೆಳಗಾವಿ ಕಾಂಗ್ರೆಸ್‌ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಂಡಿತು.

ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದರು.

ಗಾಂಧೀಜಿಯ 25 ಅಡಿಯ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗಿದ್ದು, ಈ ಪ್ರತಿಮೆಗೆ 20 ಟನೆ ಕಂಚನ್ನು ಬಳಸಲಾಗಿದೆ. ಈ ಪ್ರತಿಮೆಯನ್ನು ಅರುಣ್‌ ಯೋಗಿರಾಜ್‌ ಅವರು ಕೆತ್ತನೆ ಮಾಡಿದ್ದಾರೆ.

ಬೆಳಗಾವಿಯಲ್ಲಿಂದು ಭಾರತ ಗಾಂಧಿ ಸಮಾವೇಶ ಆಯೋಜಿಸಲಾಗಿದ್ದು, ಚರಕ ತಿರುಗಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಗಾಂಧೀಜಿ ಪುತ್ಥಳಿ ಅನಾವರಣ ಮಾಡಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಸಂಸದೆ ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸ್ಪೀಕರ್‌ ಯು.ಟಿ.ಖಾದರ್, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

9 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

10 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

10 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

10 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

10 hours ago