ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಆರೋಪದಡಿ ಬುರುಡೆ ಗ್ಯಾಂಗ್ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ಷಡ್ಯಂತ್ರ ಅನ್ನೋದು ಇದೀಗ ಸಾಬೀತಾಗುವ ಹಂತಕ್ಕೆ ಬಂದಿದೆ. ಈ ಷಡ್ಯಂತ್ರ ನಡೆಸಿರುವ ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿಗೆ ಒಂದರ ಮೇಲೊಂದು ಸಂಕಷ್ಟ ಎದುರಾಗಿದೆ. ಒಂದೆಡೆ ಷಡ್ಯಂತ್ರ ನಡೆಸಿರುವ ಪ್ರಕರಣದ ಸೂತ್ರಧಾರಿ ಇದೇ ಮಹೇಶ್ ಶೆಟ್ಟಿ ತಿಮರೋಡಿ ಅನ್ನೋದು ಭಾಗಶಃ ಕನ್ಫರ್ಮ್ ಆಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣದಲ್ಲೂ ತಿಮರೋಡಿಗೆ ಬಂಧನ ಆಗುವ ಭೀತಿ ಎದುರಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿಯ ಉಜಿರೆಯಲ್ಲಿರುವ ಮನೆಗೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು. ಈ ವೇಳೆ ಮನೆಯಲ್ಲಿ ಮಾರಕಾಸ್ತ್ರಗಳು ಸೇರಿದಂತೆ 5.5 ಎಂಎಂನ ಏರ್ ಗನ್ ಪತ್ತೆಯಾಗಿದ್ದವು. ಅದನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡ ಬಳಿಕ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.





