ರಾಜ್ಯ

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಆರೋಪದಡಿ ಬುರುಡೆ ಗ್ಯಾಂಗ್‌ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ.

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ಷಡ್ಯಂತ್ರ ಅನ್ನೋದು ಇದೀಗ ಸಾಬೀತಾಗುವ ಹಂತಕ್ಕೆ ಬಂದಿದೆ. ಈ ಷಡ್ಯಂತ್ರ ನಡೆಸಿರುವ ಬುರುಡೆ ಗ್ಯಾಂಗ್‌ನ ಮಹೇಶ್‌ ಶೆಟ್ಟಿ ತಿಮರೋಡಿಗೆ ಒಂದರ ಮೇಲೊಂದು ಸಂಕಷ್ಟ ಎದುರಾಗಿದೆ. ಒಂದೆಡೆ ಷಡ್ಯಂತ್ರ ನಡೆಸಿರುವ ಪ್ರಕರಣದ ಸೂತ್ರಧಾರಿ ಇದೇ ಮಹೇಶ್‌ ಶೆಟ್ಟಿ ತಿಮರೋಡಿ ಅನ್ನೋದು ಭಾಗಶಃ ಕನ್ಫರ್ಮ್‌ ಆಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣದಲ್ಲೂ ತಿಮರೋಡಿಗೆ ಬಂಧನ ಆಗುವ ಭೀತಿ ಎದುರಾಗಿದೆ.

ಮಹೇಶ್‌ ಶೆಟ್ಟಿ ತಿಮರೋಡಿಯ ಉಜಿರೆಯಲ್ಲಿರುವ ಮನೆಗೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು. ಈ ವೇಳೆ ಮನೆಯಲ್ಲಿ ಮಾರಕಾಸ್ತ್ರಗಳು ಸೇರಿದಂತೆ 5.5 ಎಂಎಂನ ಏರ್‌ ಗನ್‌ ಪತ್ತೆಯಾಗಿದ್ದವು. ಅದನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡ ಬಳಿಕ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

19 mins ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

39 mins ago

ಮತ್ತೆ ಚಿಗುರೊಡೆದ ಎಂಡಿಎ ಹೊಸ ಬಡಾವಣೆಯ ಕನಸು

ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…

55 mins ago

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

11 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

12 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

12 hours ago