ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೇ ರಾಜ್ಯದಲ್ಲಿ ಸಮರ್ಪಕವಾಗಿ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ ಎಂದು ಪ್ರತಿಪಕ್ಷಗಳು ಪದೇ ಪದೇ ಆರೋಪ ಮಾಡುತ್ತಿವೆ. ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿವೆ.
ಎರಡೂ ಆರೋಪಗಳ ಬೆನ್ನಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಘಟನೆ ನಂತರ ಭದ್ರತಾ ವೈಫಲ್ಯದ ಆರೋಪದ ಮೇರೆಗೆ ಕೆಲವು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿತ್ತು. ಆದರೆ, ಇದೀಗ ದೊಡ್ಡಮಟ್ಟದಲ್ಲಿ ಇಲಾಖೆಗೆ ಸರ್ಜರಿ ಮಾಡಿದೆ.
ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿರುವ ಸಂದರ್ಭದಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.
ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.





