ರಾಜ್ಯ

ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ: 35 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೇ ರಾಜ್ಯದಲ್ಲಿ ಸಮರ್ಪಕವಾಗಿ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ ಎಂದು ಪ್ರತಿಪಕ್ಷಗಳು ಪದೇ ಪದೇ ಆರೋಪ ಮಾಡುತ್ತಿವೆ. ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿವೆ.

ಎರಡೂ ಆರೋಪಗಳ ಬೆನ್ನಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಘಟನೆ ನಂತರ ಭದ್ರತಾ ವೈಫಲ್ಯದ ಆರೋಪದ ಮೇರೆಗೆ ಕೆಲವು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿತ್ತು. ಆದರೆ, ಇದೀಗ ದೊಡ್ಡಮಟ್ಟದಲ್ಲಿ ಇಲಾಖೆಗೆ ಸರ್ಜರಿ ಮಾಡಿದೆ.

ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿರುವ ಸಂದರ್ಭದಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.

ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

32 mins ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

33 mins ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

37 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

40 mins ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

45 mins ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

57 mins ago