Mysore
22
few clouds

Social Media

ಶನಿವಾರ, 31 ಜನವರಿ 2026
Light
Dark

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ.

ಹಣದ ಆಮಿಷಕ್ಕೆ ಒಳಗಾಗಿ ಎ1 ಆರೋಪಿ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್‌ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ ಶವಗಳನ್ನು ಹೂತಿದ್ದೇನೆ ಎಂದು ಚಿನ್ನಯ್ಯನಿಂದ ಸುಳ್ಳು ಹೇಳಿಸಿ ವಿಡಿಯೋ ರೆಕಾರ್ಡ್‌ ಮಾಡಿಕೊಳ್ಳಲಾಗಿತ್ತು.

ಇದನ್ನು ಓದಿ: ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್‌ ಆದೇಶ

ಚಿನ್ನಯ್ಯನಿಗೆ ಮೊದಲಿನಿಂದಲೂ ಪರಿಚಿತನಾಗಿದ್ದ ವಿಠ್ಠಲಗೌಡ ಮಹೇಶ್‌ ತಿಮರೋಡಿ ಮನೆಗೆ ಆತನನ್ನು ಕರೆದೊಯ್ದಿದ್ದ. ತಿಮರೋಡಿ ಮನೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಟ್ಟಣ್ಣನವರ್‌, ಜಯಂತ್‌, ವಿಠ್ಠಲಗೌಡ ಭಾಗಿಯಾಗಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿಗೆ ಪ್ಲ್ಯಾನ್‌ ನಡೆದಿತ್ತು.

ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಿದ್ದರು. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸಿದ್ದರು. ಈ ಎಲ್ಲಾ ಮಾಹಿತಿ ಎಸ್‌ಐಟಿ ತನಿಖೆ ವೇಳೆ ಬಹಿರಂಗವಾಗಿದೆ.

ಇನ್ನು ಮಾಸ್ಕ್‌ ಮ್ಯಾನ್‌ ಚಿನ್ನಯ್ಯಗೆ ಕೋರ್ಟ್‌ ಜಾಮೀನು ನೀಡಿದರೂ ಬಿಡುಗಡೆ ಭಾಗ್ಯ ಮಾತ್ರ ಸಿಕ್ಕಿಲ್ಲ. ನವೆಂಬರ್.‌26ರಂದು ಚಿನ್ನಯ್ಯಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿತ್ತು. ಇಬ್ಬರು ಜಾಮೀನುದಾರರು, 1 ಲಕ್ಷ ಬಾಂಡ್‌ ನೀಡಲು ಕೋರ್ಟ್‌ ಆದೇಶ ನೀಡಿತ್ತು. ಆದರೆ ಯಾರೂ ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆಯಲ್ಲಿ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಇರುವಂತಾಗಿದೆ.

Tags:
error: Content is protected !!