ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ.
ಹಣದ ಆಮಿಷಕ್ಕೆ ಒಳಗಾಗಿ ಎ1 ಆರೋಪಿ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ ಶವಗಳನ್ನು ಹೂತಿದ್ದೇನೆ ಎಂದು ಚಿನ್ನಯ್ಯನಿಂದ ಸುಳ್ಳು ಹೇಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿತ್ತು.
ಇದನ್ನು ಓದಿ: ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶ
ಚಿನ್ನಯ್ಯನಿಗೆ ಮೊದಲಿನಿಂದಲೂ ಪರಿಚಿತನಾಗಿದ್ದ ವಿಠ್ಠಲಗೌಡ ಮಹೇಶ್ ತಿಮರೋಡಿ ಮನೆಗೆ ಆತನನ್ನು ಕರೆದೊಯ್ದಿದ್ದ. ತಿಮರೋಡಿ ಮನೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ ಭಾಗಿಯಾಗಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿಗೆ ಪ್ಲ್ಯಾನ್ ನಡೆದಿತ್ತು.
ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಿದ್ದರು. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸಿದ್ದರು. ಈ ಎಲ್ಲಾ ಮಾಹಿತಿ ಎಸ್‌ಐಟಿ ತನಿಖೆ ವೇಳೆ ಬಹಿರಂಗವಾಗಿದೆ.
ಇನ್ನು ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್ ಜಾಮೀನು ನೀಡಿದರೂ ಬಿಡುಗಡೆ ಭಾಗ್ಯ ಮಾತ್ರ ಸಿಕ್ಕಿಲ್ಲ. ನವೆಂಬರ್.26ರಂದು ಚಿನ್ನಯ್ಯಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿತ್ತು. ಇಬ್ಬರು ಜಾಮೀನುದಾರರು, 1 ಲಕ್ಷ ಬಾಂಡ್ ನೀಡಲು ಕೋರ್ಟ್ ಆದೇಶ ನೀಡಿತ್ತು. ಆದರೆ ಯಾರೂ ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆಯಲ್ಲಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಇರುವಂತಾಗಿದೆ.
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…