Mysore
25
overcast clouds
Light
Dark

ಇಂದಿನಿಂದ ಬೆಂಗಳೂರಿನ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ

ಬೆಂಗಳೂರು: ಕಡಲೆಕಾಯಿ ಜಾತ್ರೆಗೆ ಇಡೀ ಬೆಂಗಳೂರು ಸಜ್ಜಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಕಾಲ ಕಾಡುಮಲ್ಲೇಶ್ವರ ದೇವಾಲಯದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ನಡೆಯಲಿದೆ.

ಕಾಡುಮಲ್ಲೇಶ್ವರ ಗೆಳಯರ ಬಳಗ, ಮುಜಾರಾಯಿ ಇಲಾಖೆ ಸಹಕಾರದಲ್ಲಿ ಮಲ್ಲೇಶ್ವಂ 15ನೇ ಕ್ರಾಸ್ ನಲ್ಲಿರುವ ಶ್ರೀ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಡಲೆಕಾಯಿ ಪರಿಷೆ ಹಮ್ಮಿಕೊಳ್ಳಲಾಗಿದೆ. ಕಾರ್ತಿಕ ಮಾಸದ ಶುಭಾ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಮೂರು ದಿನಗಳ ಕಾಲ ಅಂದರೆ ಡಿಸೆಂಬರ್ 2 ರಿಂದ 4ರ ವರಗೆ ಕಡಲೆಕಾಯಿ ಪರಿಷೆ ನಡೆಯಲಿದೆ.

ಬಸವನಗುಡಿಯಲ್ಲಿ ಮಾತ್ರವಲ್ಲದೇ ಮಲ್ಲೇಶ್ವರಂನಲ್ಲಿಯೂ ಕಡಲೆಕಾಯಿ ಪರಿಷೆ ನಡೆಯುತ್ತೆ. 800 ಕೆಜಿ ಕಡಲೆ ಕಾಯಿಗಳಿಂದ 20 ಅಡಿ ಅಗಲ ಹಾಗೂ 20 ಅಡಿ ಎತ್ತರದ ಬಸವನ ಮೂರ್ತಿ ನಿರ್ಮಿಸಲಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿದೆ. ನಾಳೆ ಬೆಳಗ್ಗೆ 11:30ಕ್ಕೆ ಸುಗಮ ಸಂಗೀತ ಕಾರ್ಯಕ್ರಮ ಇರಲಿದೆ.

ತಮಿಳುನಾಡು, ಆಂಧ್ರ, ತೆಲಂಗಾಣ ಹಾಗೂ ರಾಜ್ಯದ ಮೂಲೆ ಮೂಲೆಯಿಂದ ರೈತರು ಕಡಲೆಕಾಯಿ ಪರಿಷೆಯಲ್ಲಿ ಭಾಗಿಯಾಗಲಿದ್ದಾರೆ. 200 ಮಳಿಗೆಗಳಲ್ಲಿ ರೈತರು ಬೆಳದ ಕಡಲೆಕಾಯಿ ಮತ್ತು ತರಕಾರಿ ಕರಕುಶಲ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬಂದ ಜನರಿಗೆ ಪ್ರಸಾದ ರೂಪದಲ್ಲಿ ಕಡಲೆಕಾಯಿ ವಿತರಣೆ ಮಾಡಲಾಗುತ್ತೆ. ಸರಿ ಸುಮಾರು 8 ಲಕ್ಷ ಜನರು ಪರಿಷೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ