ರಾಜ್ಯ

ಡಿಸಿಎಂ ಡಿಕೆಶಿಗೆ ಬಿಗ್‌ ಶಾಕ್:‌ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್‌ಗೆ ಬಿಗ್‌ ಶಾಕ್‌ ನೀಡಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.

ಈ ವಿಚಾರ ಸದ್ಯ ಹೈಕಮಾಂಡ್‌ ಬುಡದಲ್ಲಿದ್ದು, ಡಿಸಿಎಂ ಆಗಿರುವ ಡಿ.ಕೆ.ಶಿವಕುಮಾರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಚಿವರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ. ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಆಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಒಂದೆರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಬದಲಾವಣೆ ಆಗುತ್ತದೆ. 8 ದಿನಗಳಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

1 hour ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago