ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ತಡರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರು.
ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತಡರಾತ್ರಿ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಡಿಕೆಶಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯಿಂದ ರಾಜ್ಯ ರಾಜಕೀಯದಲ್ಲಿ ಹಲವು ಅನುಮಾನಗಳೇ ಹುಟ್ಟಿಕೊಂಡಿವೆ.
ಇದನ್ನು ಓದಿ: ಸಚಿವ ಪ್ರಿಯಾಂಕ್ ಖರ್ಗೆ ಟ್ರೋಲ್ ಮಾಡುವುದು ಖಂಡನೀಯ: ಸಚಿವ ಕೃಷ್ಣಭೈರೇಗೌಡ
ಮಾತುಕತೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿಗೆ ಅಭಯ ನೀಡಿದ್ದಾರೆ ಎನ್ನಲಾಗಿದ್ದು, ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಸಲಹೆ ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಹೈಕಮಾಂಡ್ ಎಲ್ಲಾ ಬೆಳವಣಿಗೆಯನ್ನು ಸ್ಪಷ್ಟವಾಗಿ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಬಿಹಾರ ಚುನಾವಣೆ ಮುಗಿದ ಬಳಿಕ ಎಲ್ಲರೂ ಕುಳಿತು ಮಾತನಾಡೋಣ. ಎಲ್ಲಾ ವಿಚಾರದ ಬಗ್ಗೆ ಕ್ಲಾರಿಟಿಗೆ ಬರೋಣ. ನಿಮ್ಮ ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಅಭಯ ನೀಡಿದ್ದಾರೆ ಎನ್ನಲಾಗಿದೆ.





