ರಾಜ್ಯ

1 ಗಂಟೆಗೂ ಹೆಚ್ಚು ಕಾಲ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆಶಿ ಮಾತುಕತೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ತಡರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರು.

ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತಡರಾತ್ರಿ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಡಿಕೆಶಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯಿಂದ ರಾಜ್ಯ ರಾಜಕೀಯದಲ್ಲಿ ಹಲವು ಅನುಮಾನಗಳೇ ಹುಟ್ಟಿಕೊಂಡಿವೆ.

ಇದನ್ನು ಓದಿ: ಸಚಿವ ಪ್ರಿಯಾಂಕ್‌ ಖರ್ಗೆ ಟ್ರೋಲ್‌ ಮಾಡುವುದು ಖಂಡನೀಯ: ಸಚಿವ ಕೃಷ್ಣಭೈರೇಗೌಡ

ಮಾತುಕತೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿಗೆ ಅಭಯ ನೀಡಿದ್ದಾರೆ ಎನ್ನಲಾಗಿದ್ದು, ಪಕ್ಷ ನಿಷ್ಠೆ ಹೈಕಮಾಂಡ್‌ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಸಲಹೆ ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಹೈಕಮಾಂಡ್‌ ಎಲ್ಲಾ ಬೆಳವಣಿಗೆಯನ್ನು ಸ್ಪಷ್ಟವಾಗಿ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಬಿಹಾರ ಚುನಾವಣೆ ಮುಗಿದ ಬಳಿಕ ಎಲ್ಲರೂ ಕುಳಿತು ಮಾತನಾಡೋಣ. ಎಲ್ಲಾ ವಿಚಾರದ ಬಗ್ಗೆ ಕ್ಲಾರಿಟಿಗೆ ಬರೋಣ. ನಿಮ್ಮ ಪಕ್ಷ ನಿಷ್ಠೆ ಹೈಕಮಾಂಡ್‌ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಅಭಯ ನೀಡಿದ್ದಾರೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

19 mins ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

23 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

29 mins ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

37 mins ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

42 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

46 mins ago