ಬೆಂಗಳೂರು: ಮುಖ್ಯಮಂತ್ರಿಯಾಗಬೇಕು ಎಂದು ಯಾರಿಗೆ ಆಸೆ ಇಲ್ಲ. ಎಲ್ಲಾ ಸಚಿವರು, ಶಾಸಕರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕೆ ಸೂಕ್ತ ವ್ಯಕ್ತಿ. ಖರ್ಗೆ ಅವರು ಸಿಎಂ ಆಗಲಿ ಎಂದು ಹೇಳಿದರು.
ನಾನು ಒಂದು ಕಾಲದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ವಿಚಾರದಲ್ಲಿ ತಪ್ಪು ಮಾತನಾಡಿದ್ದೆ. ತಪ್ಪು ಮಾಡಿದ್ದನ್ನು ಒಪ್ಪಿಕೊಳ್ಳುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸ್ಥಾನಕ್ಕೆ ಅರ್ಹವಾದ ಹಾಗೂ ಸೂಕ್ತವಾದ ವ್ಯಕ್ತಿ ಎಂದು ಹೇಳಿದರು.





