Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಸರ್ವಪಕ್ಷ ಸಭೆ ಕರೆಯುವಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕದನ ವಿರಾಮ ಘೋಷಣೆಯಾಗಿದ್ದ ಅಮೇರಿಕಾ ಮಧ್ಯಸ್ಥಿಕೆಯಿಂದ ಎಂಬ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:- ಸಹಜ ಸ್ಥಿತಿಗೆ ಮರಳಿದ ಜಮ್ಮು-ಕಾಶ್ಮೀರ: ಶಾಲೆಗಳು ಓಪನ್‌ 

ಕದನ ವಿರಾಮ ಅತ್ಯಂತ ಸೂಕ್ಷ್ಮ ವಿಚಾರ. ಡೊನಾಲ್ಡ್‌ ಟ್ರಂಪ್‌ ಕ್ರೆಡಿಟ್‌ ತೆಗೆದುಕೊಳ್ಳುವುದನ್ನು ಈ ರೀತಿ ಮಾತನಾಡುತ್ತಿದ್ದಾರೆ. ಆದ್ರೆ ಮೋದಿ ಇಲ್ಲ ಎನ್ನುತ್ತಿದ್ದಾರೆ. ಅವರಿಬ್ಬರ ನಡುವೆ ಏನು ಮಾತುಕತೆ ಆಗಿದೆ ಈ ಬಗ್ಗೆ ನಮಗೆ ಗೊತ್ತಿಲ್ಲ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದರೆ ನಾನು ಮಾತನಾಡುತ್ತೇನೆ ಎಂದು ಹೇಳಿದರು.

 

Tags:
error: Content is protected !!