ಬೆಂಗಳೂರು: ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿದ್ದ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಡಿಸಿಎಂ ಡಿಕೆಶಿ ಹಾಗೆ ಹೇಳಬಾರದಿತ್ತು. ಹೇಳಿದ್ದಾರೆ. ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಪದೇ ಪದೇ ಅದನ್ನು ಎತ್ತಿ ಹಿಡಿಯುವುದು ಬೇಡ ಎಂದು ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕ್ಲೋಸ್ ಆದ ಕೇಸ್ ಓಪನ್ ಮಾಡೋಕೆ ನಾನು ಹೋಗುವುದಿಲ್ಲ. ಮುಂದೆ ಯಾರು ಹೀಗೆ ಮಾಡಬಾರದು ಎಂದು ಕಿವಿಮಾತು ಹೇಳಿದರು.





